ತುಮಕೂರು : ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ನಗರದ ಶಿರಾ ಗೇಟ್ ಬಳಿ ನಡೆದಿದೆ. ಶಿವಮ್ಮ(55) ಮೃತ ಮಹಿಳೆ ಎನ್ನಲಾಗಿದ್ದು, ಬೈಕ್ ಸವಾರ ಬಸ್ಗೆ ಸೈಡ್ ಕೊಡಲು ಹೋಗಿ ಆಯತಪ್ಪಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂಬದಿಗೆ ಬಿದ್ದ ಮಹಿಳೆಯ ತಲೆ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಶ್ರೀನಿವಾಸ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಶ್ರೀದೇವಿ ನರ್ಸಿಂಗ್ ಹೋಂಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










