ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ…

227
firstsuddi

ನವದೆಹಲಿ : ನವದೆಹಲಿ : ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಅನರ್ಹ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿ ತುರ್ತು ವಿಚಾರಣೆ ನಡೆಸಬೇಕು ಎಂದು ಅನರ್ಹ ಶಾಸಕರು ನಿನ್ನೆ ನ್ಯಾ. ಎನ್.ವಿ.ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದರು. ಆದರೆ ತುರ್ತು ವಿಚಾರಣೆ ಇಂದು ಸಾಧ್ಯವಿಲ್ಲ ಎಂದು ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಆದರೆ ಇಂದು ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ರಿಜಿಸ್ಟಾರ್ ಪ್ರಕರಣವನ್ನು ಲಿಸ್ಟ್ ಮಾಡಿದ ಬಳಿಕ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.