ಮರಳಿನ ದಿಬ್ಬ ಕುಸಿದು ಬಿದ್ದು ಮೂವರು ಮಕ್ಕಳ ಸಾವು…

226
firstsuddi

ಕೊಪ್ಪಳ : ಮರಳಿನ ದಿಬ್ಬ ಕುಸಿದು ಬಿದ್ದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ನವಲಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಸೋನು(7), ಸವಿತಾ(4), ಕವಿತಾ(3) ಮೃತ ಮಕ್ಕಳು ಎಂದು ಗುರುತಿಸಲಾಗಿದ್ದು, ಮಕ್ಕಳು ಮರಳಿನ ದಿಬ್ಬದ ಮೇಲೆ ಆಟವಾಡುತ್ತಿದ್ದ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿದ್ದ ಮರಳು ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳಕ್ಕೆ ಕನಕಗಿರಿ ತಹಸೀಲ್ದಾರ್ ರವಿ ಅಂಗಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.