ಮೂಡಿಗೆರೆ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ…

1469
firstsuddi

ಮೂಡಿಗೆರೆ : ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತವಾಗಿದ್ದ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಈಗಾ ರಸ್ತೆಯ ದುರಸ್ಥಿ ಕಾರ್ಯ ಸ್ವಲ್ಪ ಮಟ್ಟಿಗೆ ಮುಗಿದಿದ್ದು, ಲಘು ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ನಾಳೆ ಬೆಳಿಗ್ಗೆ 6ಗಂಟೆಯಿಂದ ವಾಹನ ಸಂಚಾರ ,ಆರಂಭವಾಗಲಿದೆ.    ವೇಗದ  ಮಿತಿ 20 ಕಿಲೋಮೀಟರ್ ಮೀರುವಂತೆ ಇಲ್ಲ ಎಂದು ವಾಹನ ಸವಾರರಿಗೆ ಸೂಚನೆ ನೀಡಿದ್ದು.ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಬೈಕು, ಕಾರು,  ಆಂಬುಲೆನ್ಸ್ ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ.