ಮಹಾರಾಷ್ಟ್ರ : ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು 8ಮಂದಿ ಮೃತಪಟ್ಟು 15ಮಂದಿ ಗಾಯಗೊಂಡಿರುವ ಘಟನೆ ಧುಲೆ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕಾರ್ಖಾನೆಯಲ್ಲಿದ್ದ ಹಲವು ಸಿಲಿಂಡರ್ ಗಳು ಸ್ಪೋಟಗೊಂಡ ಪರಿಣಾಮ ಸ್ಥಳದಲ್ಲೇ 8 ಮಂದಿ ಸಜೀವ ದಹನವಾಗಿದ್ದು, 15ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಕಾರ್ಖಾನೆಯ ಸುತ್ತಮುತ್ತ ದಟ್ಟ ಹೊಗೆಯಿಂದ ಕೂಡಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.










