ತೈಲ ಮತ್ತು ನೈಸರ್ಗಿಕ ಅನಿಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ, ಐವರು ಕಾರ್ಮಿಕರ ಸಾವು…

380
firstsuddi

ಮುಂಬೈ : ತೈಲ ಮತ್ತು ನೈಸರ್ಗಿಕ ಅನಿಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮುಂಬೈನ ಉರನ್ ಪ್ರದೇಶದಲ್ಲಿ ನಡೆದಿದೆ. ಒಎನ್‍ಜಿಸಿ ತೈಲ ಸಂಸ್ಕರಣಾ ಘಟಕದ ಮಳೆ ನೀರು ಕಾಲುವೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಐವರು ಕಾರ್ಮಿಕರು ಮೃತಪಟ್ಟಿದ್ದು, ಎಂಟು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.