ಹಾಸನ : ಕುಡಿದ ಮತ್ತಿನಲ್ಲಿ ನಿನ್ನೆ ಪ್ರತಿಷ್ಟಾಪನೆ ಮಾಡಿದ್ದ ಗಣೇಶ ಮೂರ್ತಿಯನ್ನು ವಿರೂಪಗೊಳಿಸಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಕಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ತಮ್ಮ ಇಚ್ಚೆಗೆ ವಿರುದ್ಧವಾಗಿ ಗಣೇಶನನ್ನು ಕೂರಿಸಲಾಗಿದೆ ಎಂಬ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಹರೀಶ ಹಾಗೂ ಸಚಿನ್ ಎಂಬುವವರು ಗಣೇಶ ಮೂರ್ತಿಯನ್ನು ವಿರೂಪಗೊಳಿಸಿ ಸಾಮರಸ್ಯ ಕದಡುವ ಕೃತ್ಯವನ್ನು ಎಸಗಿದ್ದು, ಇದನ್ನು ಪ್ರಶ್ನೆ ಮಾಡಲು ಹೋದ ಗ್ರಾಮಸ್ಥರಿಗೂ ಅವಾಜ್ ಹಾಕಿದ್ದು, ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










