ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ : ಸಿದ್ದರಾಮಯ್ಯ ಟ್ವೀಟ್…

203
firstsuddi

ಬೆಂಗಳೂರು : ದೆಹಲಿ ನಿವಾಸದಲ್ಲಿ ದಾಖಲೆಯಿಲ್ಲದ ಹಣ ಸಿಕ್ಕಿದ ವಿಷಯಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಕಾರಣ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಟ್ವೀಟ್ ಮಾಡಿದ್ದಾರೆ.