ನವದೆಹಲಿ : ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ.ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಿಬಿಐ ವಶದಲ್ಲಿರುವ ಚಿದಂಬರಂ ಅವರನ್ನು ಇಡಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ತೆಗೆದುಕೊಳ್ಳಲು ಮುಂದಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿದಂಬರಂ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಚಿದಂಬರಂ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಭಾನುಮತಿ ಮತ್ತು ನ್ಯಾ. ಎ.ಎಸ್. ಬೋಪಣ್ಣ ನೇತೃತ್ವದ ಧ್ವಿಸದಸ್ಯ ಪೀಠ ಪ್ರಾಥಮಿಕ ವಿಚಾರಣೆ ನಡೆಯುತ್ತಿರುವ ವೇಳೆ ಜಾಮೀನು ನೀಡುವುದು ಸರಿಯಲ್ಲ ಎಂದು ಚಿದಂಬರಂ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.










