ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತಮ್ಮ ಟ್ವಿಟರ್ ಮೂಲಕ ಕಿಡಿಕಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ನೀವು ಆರೋಪಿಸಿದಂತೆ CBI, IT, ID ಮೇಲೆ ನನ್ನ ನಿಯಂತ್ರಣ ಇರುವುದು ನಿಜವೇ ಆಗಿದ್ದರೆ 56 ಇಂಚು ಎದೆಯ ಪ್ರಧಾನಿ ನರೇಂದ್ರ ಮೋದಿಯವರಿಗೇನು ಕೆಲಸ? ರಾಜೀನಾಮೆ ಕೊಟ್ಟು ಮನೆಗೆ ಹೋಗಲು ಹೇಳಿ. ಇವಿಎಂ ಬಗ್ಗೆ ಸಾಕಷ್ಟು ಅನುಮಾನಗಳಿವೆ. ನನಗೆ ಅಧಿಕಾರವಿದ್ದರೆ ಇವಿಎಂ ರದ್ದುಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಯುವಂತೆ ಮಾಡುತ್ತಿದ್ದೆ. ಮುಂಬರುವ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು. ಎಲ್ಲ ಪಕ್ಷಗಳು ಇದಕ್ಕೆ ಸಹಕಾರ ನೀಡಿದರೆ, ಕಾಂಗ್ರೆಸ್ ಪಕ್ಷ ಇದರ ನೇತೃತ್ವ ವಹಿಸಿಕೊಳ್ಳಲು ಸಿದ್ಧವಿದೆ. ಅಲ್ಲದೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಜಿ.ಡಿ.ಪಿ ಕುಸಿಯುತ್ತಲೇ ಇದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಕೇವಲ ಭಾಷಣದಲ್ಲಿ ಕಾಲ ಕಳೆಯುತ್ತಿರುವ ಪ್ರಧಾನಿಗಳು ಆಡಳಿತವನ್ನು ಮರೆತೇ ಬಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆರ್ಥಿಕ ಶಿಸ್ತು ಕಾಪಾಡಿದ್ದರು. ಮೋದಿಯವರ ಆಡಳಿತದಲ್ಲಿ ದೇಶದ ಆರ್ಥಿಕತೆ ಅಧೋಗತಿ ತಲುಪಿದೆ. ಎಂದು ಟ್ವೀಟ್ ಮಾಡಿದ್ದಾರೆ. 












