ಲಷ್ಕರ್-ಎ-ತೋಯಿಬಾ ಉಗ್ರ ಸಂಘಟನೆಯ ಮುಖ್ಯ ಉಗ್ರನನ್ನು ಹೊಡೆದುರುಳಿಸಿದ ಭರತೀಯ ಸೇನೆ…

363
firstsuddi

ಶ್ರೀನಗರ : ಜಮ್ಮು ಕಾಶ್ಮೀರಾದ ಸೊಪೋರ್‍ನಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಲಷ್ಕರ್-ಎ-ತೋಯಿಬಾ ಉಗ್ರ ಸಂಘಟನೆಯ ಮುಖ್ಯ ಉಗ್ರ ಆಸಿಫ್‍ನನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ಕದಡುವ ಸಲುವಾಗಿ ಆಸಿಫ್ ಹಣ್ಣಿನ ವ್ಯಾಪಾರಿಯೊಬ್ಬರ ಕುಟುಂಬದ ಮೇಲೆ ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದ ಎನ್ನಲಾಗಿದ್ದು, ಆಸಿಫ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಆಸಿಫ್‍ನನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಆಸಿಫ್ ಗಾಡಿಯನ್ನು ನಿಲ್ಲಿಸದೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ ಆಸಿಫ್‍ನನ್ನು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.