ಸ್ವಚ್ಚತಾ ಅಭಿಯಾನ ನಡೆಸಿ ಮೋದಿ ಅವರಿಗೆ ಜನ್ಮದಿನದ ಶುಭಕೋರಿದ ಸಚಿವ ಕೆ.ಎಸ್. ಈಶ್ವರಪ್ಪ…

206
firstsuddi

ಶಿವಮೊಗ್ಗ : ಇಂದು ಪ್ರಧಾನಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬದ ಅಂಗವಾಗಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಕೋರಿದ್ದಾರೆ. ಇಂದು ಬೆಳಿಗ್ಗೆ ಸಚಿವರು, ಬಿಜೆಪಿ ಕಾರ್ಯಕರ್ತರು ಹಾಗೂ ನರೇಂದ್ರ ಮೋದಿ ಅವರ ಅಭಿಮಾನಿಗಳು ನಗರದ ವಿನೋಬನಗರ ಮಾರುಕಟ್ಟೆ ಆವರಣಕ್ಕೆ ಆಗಮಿಸಿ ಪೊರಕೆ ಹಿಡಿದು ರಸ್ತೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಆಚರಿಸಿದರು. ಇದೇ ವೇಳೆ ಸಚಿವ ವಿ. ಸೋಮಣ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೋದಿಯವರಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಹಾಗೂ ಜಿ.ಟಿ. ದೇವೇಗೌಡ ಅವರು ಉಪಸ್ಥಿತರಿದ್ದರು.