ಮನೆಯ ಗೋಡೆ ಕುಸಿದು 4ವರ್ಷದ ಮಗು ಸಾವು, ತಂದೆ ತಾಯಿಗೆ ಗಂಭೀರ ಗಾಯ…

203
firstsuddi

ಚಾಮರಾಜನಗರ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು 4ವರ್ಷದ ಮಗು ಮೃತಪಟ್ಟು ತಂದೆ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ವೀರಭದ್ರಸ್ವಾಮಿ(4) ಮೃತ ದುರ್ಧೈವಿ. ಇಂದು ಬೆಳಗ್ಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಮನೆಯ ಗೋಡೆ ಕುಸಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ತಂದೆ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ತಹಾಸೀಲ್ದಾರ್ ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.