“ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ”- ನಟ ದರ್ಶನ್ ಟ್ವೀಟ್…

247
firstsuddi

ಬೆಂಗಳೂರು : ಇತ್ತೀಚೆಗೆ ಬಿಡುಗಡೆಯಾದ ನಟ ಸುದೀಪ್ ಅಭಿನಯದ “ಪೈಲ್ವಾನ್” ಸಿನಿಮಾವನ್ನು ನಟ ದರ್ಶನ್ ಅಭಿಮಾನಿಗಳು ಪೈರೆಸಿ ಮಾಡಿದ್ದಾರೆ ಎಂದು ನಟ ಸುದೀಪ್ ಅಭಿಮಾನಿಗಳು ಆರೋಪಿಸಿದ್ದರು. ಈ ಕುರಿತು ಪೈಲ್ವಾನ್ ಚಿತ್ರದ ನಿರ್ಮಾಪಕಿ ಸ್ವಪ್ನ ಅವರು ಪೈಲ್ವಾನ್ ಸಿನಿಮಾವನ್ನು ಪೈರೆಸಿ ಮಾಡಲಾಗಿದೆ ಎಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ದರ್ಶನ್ ಅಭಿಮಾನಿಗಳು ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಇದಕ್ಕೆ ನಟ ದರ್ಶನ್ ಅವರು ತಮ್ಮ ಟ್ವಿಟರ್ ಮೂಲಕ ಎಚ್ಚರಿಕೆ ನೀಡಿದ್ದು, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ. ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು-ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ” ಎಂದು ತಮ್ಮ ಟ್ವಿಟರ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.