ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ, ಬಿಜೆಪಿ ನಾಯಕ ಚಿನ್ಮಯಾನಂದ ಬಂಧನ…

199
firstsuddi

ನವದೆಹಲಿ : ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಿಜೆಪಿ ನಾಯಕ ಚಿನ್ಮಯಾನಂದ ಅವರನ್ನು ಇಂದು ಬಂಧಿಸಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ ಎಂದು ಉತ್ತರಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಚಿನ್ಮಯಾನಂದೊಡೆತನದ ಕಾನೂನು ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಕೆಲವು ದಿನಗಳ ಹಿಂದೆ ಸಂತ ಸಮುದಾಯದ ಹಿರಿಯ ನಾಯಕ ನನಗೆ ಕಾಲೇಜಿಗೆ ಸೇರಲು ಸಹಾಯ ಮಾಡುತ್ತೇನೆ ಎಂದು ಹೇಳಿ ನನ್ನ ಮೇಲೆ ಹಲವು ವರ್ಷಗಳವರೆಗೆ ಅತ್ಯಾಚಾರ ಎಸಗಿ, ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದರು. ಅಲ್ಲದೇ ನಾನು ಸ್ನಾನ ಮಾಡುವುದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದರು ಎಂದು ವೀಡಿಯೋ ಮಾಡುವ ಮೂಲಕ ಆರೋಪ ಮಾಡಿ ನಾಪತ್ತೆಯಾಗಿದ್ದರು. ಬಳಿಕ ವಿದ್ಯಾರ್ಥಿನಿ ಪೋಷಕರು ಚಿನ್ಮಯಾನಂದ ಅವರಿಂದ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ಉಂಟಾಗುತ್ತಿತ್ತು ಎಂದು ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಉತ್ತರ ಪ್ರದೇಶದ ಪೊಲೀಸರು ಇಂದು ಚಿನ್ಮಯಾನಂದ ಅವರನ್ನು ಬಂಧಿಸಿದ್ದಾರೆ.