ಹಾಸನ : ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾತು ಬಂಗಾರ, ಆದರೆ ಕಿವಿ ಹಿತ್ತಾಳೆ ಎಂಬ ಮಾಜಿ ಸಂಸದ ಶಿವರಾಮೇಗೌಡ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿಕ್ರಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸದಬುಟ್ಟಿಯಲ್ಲಿ ಇದ್ದವರನ್ನು ತೆಗೆದುಕೊಂಡು ಗೆಲ್ಲಿಸುತ್ತಾರೆ. ಶಿವರಾಮೇಗೌಡ ಅವರಂಥವರನ್ನು ಬೆಳೆಸುತ್ತಾರೆ. ಇದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ದೌರ್ಭಾಗ್ಯ. ಕುಮಾರಸ್ವಾಮಿ ಧರ್ಮರಾಯ ಇದ್ದ ಹಾಗೆ ಕೆಲವರು ಹೇಳಿದರೆ ಅದಕ್ಕೆ ಸರಿ ಎಂದು ಹೇಳುತ್ತಾರೆ. ಅದಕ್ಕೆ ಈ ರೀತಿ ಆಗುತ್ತದೆ. ಬ್ಯಾಕ್ ಗ್ರೌಂಡ್ ನೋಡಿ ನಂತರ ಪಕ್ಷದಲ್ಲಿ ಅವಕಾಶ ಕೊಡಬೇಕು. ಆದರೆ ಅದು ಯಾವುದನ್ನು ಮಾಡದೇ ಹೋದರೆ ಮುಂದೆ ಹೀಗಾಗುತ್ತದೆ ಎಂದು ಶಿವರಾಮೇಗೌಡ ಅವರ ವಿರುದ್ಧ ಕಿಡಿಕಾರಿದರು.










