ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದ ಸುಪ್ರೀಂ…

236
firstsuddi

ನವದೆಹಲಿ : ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿ ಅವರು, ಶಾಸಕರ ರಾಜೀನಾಮೆ ವಿಚಾರದಲ್ಲಿ ಮಾಜಿ ಸ್ಪೀಕರ್ ಅವರು ನ್ಯಾಯಬದ್ಧವಾಗಿ ನಡೆದುಕೊಂಡಿಲ್ಲ. ರಾಜೀನಾಮೆ ಅಂಗೀಕಾರ ಮಾಡದೆ ಅನರ್ಹ ಮಾಡಿದ್ದಾರೆ. ಹೀಗಾಗಿ ಅನರ್ಹ ಶಾಸಕರು ಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೊರ್ಟ್‍ನಲ್ಲಿ ಇದ್ದಂತೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ. ಸೆ.30 ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹೀಗಾಗಿ ಮಧ್ಯಂತರ ಚುನಾವಣೆಗೆ ತಡೆಯಾಜ್ಞೆ ನೀಡಬೇಕು ಎಂದು ವಾದ ಮಂಡಿಸಿದರು. ಮುಕುಲ್ ರೋಹ್ಟಗಿ ಅವರ ವಾದದ ಬಳಿಕ ಕಪಿಲ್ ಸಿಬಲ್ ಅವರು ಪ್ರತಿವಾದ ಮಂಡಿಸಿ ಕಾಲಾವಕಾಶವನ್ನು ಕೇಳಿದರು. ವಾದ ಪ್ರತಿವಾದವನ್ನು ಆಲಿಸಿದ ತ್ರಿಸದಸ್ಯ ಪೀಠ ಬುಧವಾರ ಮುಕುಲ್ ರೋಹ್ಟಗಿ ಹಾಗೂ ಗುರುವಾರ ಕಪಿಲ್ ಸಿಬಲ್ ಅವರು ವಾದ ಮಂಡಿಸಲಿ ಎಂದು ವಿಚಾರಣೆಯನ್ನು ಮುಂದೂಡಿದರು.