ಚಿಕ್ಕಮಗಳೂರು: ಡಿಸೇಲ್ ಖಾಲಿಯಾಗಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಮೂವರು ಸಾವು…

866

ಚಿಕ್ಕಮಗಳೂರು : ಡೀಸೆಲ್ ಖಾಲಿಯಾಗಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಗೌರಿಹಳ್ಳದ ಬಳಿ ನಡೆದಿದೆ.ಬಸ್ ನಲ್ಲಿದ್ದ  ಇಬ್ಬರು ಪ್ರಯಾಣಿಕರು ಸೇರಿದಂತೆ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು.ಕೆಎಸ್ಆರ್ಟಿಸಿ ಬಸ್ ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು ಎನ್ನಲಾಗಿದ್ದು. ಬಸ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು ಗಾಯಗೊಂಡ ಪ್ರಯಾಣಿಕರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು.    ಸಖರಾಯಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.