ಮೂಡಿಗೆರೆ : ನೀರಿಗೆ ಬಿದ್ದು ಆರು ವರ್ಷದ ಬಾಲಕ ಸಾವು…

1251
firstsuddi

ಮೂಡಿಗೆರೆ : ನೀರಿಗೆ ಬಿದ್ದು ಆರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಾರಬೈಲ್ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ರಮೇಶ್ ಹಾಗೂ ಲಕ್ಷ್ಮಿ ದಂಪತಿ ಪುತ್ರ ಎನ್ನಲಾಗಿದ್ದು, ಪ್ರೀತಂ(6) ಮೃತ ಬಾಲಕ. ನಿನ್ನೆ ಅಂಗನವಾಡಿಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದನು. ಇಂದು ಕಾಫಿ ತೋಟದ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.