ನಾಮಪತ್ರ ಸಲ್ಲಿಕೆಗೆ ಒಂದು ಲಕ್ಷ ಜನ ಸೇರಿಸುತ್ತೇನೆ : ರಮೇಶ್ ಜಾರಕಿಹೊಳಿ.

466
firstsuddi

ಬೆಳಗಾವಿ : ನಾನು ಯಮಕನಮರಡಿ ಕ್ಷೇತ್ರದಿಂದ ಸ್ಪರ್ಧಿಸಿ ಸತೀಶ್ ಅವರ ತಾಕತ್ ನೋಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಅವರು ಸತೀಶ್ ಜಾರಕಿಹೊಳಿ ಅವರಿಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜೀನಾಮೆ ನೀಡಿದ ವೇಳೆ ಅರ್ಜಿಯನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸದೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಏಜೆಂಟರಂತೆ ಕೆಲಸ ಮಾಡಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ನ್ಯಾಯಾಲಯದಲ್ಲಿ ಅನರ್ಹ ಶಾಸಕರು ನೀಡಿರುವ ಅರ್ಜಿ ವಿಚಾರಣೆಯಾಗುತ್ತಿದ್ದು, ಈ ಕುರಿತು ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ಸಂಪೂರ್ಣವಾಗಿ ನಮಗೆ ನಂಬಿಕೆ ಇದೆ. ನ್ಯಾಯ ನಮ್ಮ ಪರವಾಗಿ ಬರುತ್ತದೆ ಎಂಬ ವಿಶ್ವಾಸ ನನಗೆ ಇದೆ. ಅಲ್ಲದೇ ಗೋಕಾಕ್ ಕ್ಷೇತ್ರದ ಜನತೆ ಸ್ವಲ್ಪ ಗೊಂದಲದಲ್ಲಿದ್ದಾರೆ. ಹೀಗಾಗಿ ಸಭೆ ನಡೆಸಲಾಗುತ್ತಿದೆ. ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಸೋಮವಾರ ನಾಮಪತ್ರ ಸಲ್ಲಿಕೆ ವೇಳೆ ಒಂದು ಲಕ್ಷ ಜನ ಸೇರಿಸುವ ನಿರ್ಧಾರ ಮಾಡಿದ್ದೇನೆ. ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಲಖನ್ ಜಾರಕಿಹೊಳಿಯನ್ನು ಭೇಟಿ ಮಾಡಿ ಹೇಳುತ್ತೇನೆ. ಲಖನ್ ಗೆ ಮುಂದಿನ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ. ನಾನು ಯಮಕನಮರಡಿ ಕ್ಷೇತ್ರದಿಂದ ಸ್ಪರ್ಧಿಸಿ ಸತೀಶ್ ಜಾರಕಿಹೊಳಿಯ ತಾಕತ್ ನೋಡುತ್ತೇನೆ ಎಂದು ಸವಾಲ್ ಹಾಕಿದರು.