ತಂತಿ ಮೇಲಿಂದನೇ ಪ್ರವಾಹ ಪೀಡಿತ ಜನರ ಕಡೆಗೂ ನೋಡಿ : ಹೆಚ್.ಡಿ. ಕುಮಾರಸ್ವಾಮಿ ಟಾಂಗ್…

203
firstsuddi

ಬೆಂಗಳೂರು : ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಟಾಂಗ್ ನೀಡಿದ್ದು, ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ CM ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು ‘ತಂತಿ’ ಮೇಲಿಂದ ಇಳಿಸುತ್ತಾರೆ ಎಂದು ಟಾಂಗ್ ನೀಡಿದ್ದಾರೆ. ನಿನ್ನೆ ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಾನು ಒಂದು ರೀತಿ ತಂತಿ ಮೇಲೆ ನಡೆಯುತ್ತಿದ್ದೇನೆ, ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾದಲ್ಲಿ ಹತ್ತಾರು ಸಲ ವಿಚಾರ ಮಾಡಬೇಕಾಗಿದೆ ಎಂದು ಹೇಳಿಕೆ ನೀಡಿದ್ದರು.