ನೆರೆ ವಿಚಾರವಾಗಿ ಪ್ರತಿಪಕ್ಷಗಳು ಬೊಬ್ಬೆ ಹಾಕುವುದನ್ನು ನಿಲ್ಲಿಸಬೇಕು : ಬಿ.ಎಸ್. ಯಡಿಯೂರಪ್ಪ.

220
firstsuddi

ಬೆಂಗಳೂರು : ನೆರೆ ವಿಚಾರವಾಗಿ ಪ್ರತಿಪಕ್ಷಗಳು ಬೊಬ್ಬೆ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಇದಕ್ಕೆ ದೊಡ್ಡ ಪ್ರಮಾಣದ ಅನುದಾನ ಬೇಕು. ಕೇಂದ್ರ ಸರ್ಕಾರ ಯಾವಾ ರಾಜ್ಯಕ್ಕೂ ಪರಿಹಾರ ಹಣವನ್ನು ಬಿಡುಗಡೆ ಮಾಡಿಲ್ಲ. ಹಾಗಂತ ನಾವು ಕಾದು ಕುಳಿತಿಲ್ಲ. ರಾಜ್ಯ ಸರ್ಕಾರದಿಂದ ನಾವು ಹಣ ಬಿಡುಗಡೆ ಮಾಡಿದ್ದೇವೆ. ಆದರೆ ಈ ವಿಚಾರವಾಗಿ ಪ್ರತಿಪಕ್ಷದವರು ಬೊಬ್ಬೆ ಹಾಕುವುದನ್ನು ನಿಲ್ಲಿಸಬೇಕು. ಸಂಪುಟ ಸಭೆ ಬಳಿಕ ಬೆಳಗಾವಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿ ಮಳೆಯಿಂದ ಉಂಟಾಗಿರುವ ನಷ್ಟದ ಬಗ್ಗೆ ಗಮನ ಹರಿಸುತ್ತೇವೆ. ಮತ್ತೊಂದು ಬಾರಿ ದೆಹಲಿಗೆ ಹೋಗಿ ಪರಿಹಾರ ಕೇಳುತ್ತೇನೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಈ ವಿಚಾರವಾಗಿ ಅತಿಯಾಗಿ ಟೀಕೆಗಳನ್ನು ಮಾಡುತ್ತಿವೆ. ಕೇಂದ್ರ ಸರ್ಕಾರದಿದ ಇನ್ನೂ ನಾಲ್ಕಾರು ದಿನಗಳಲ್ಲಿ ಪರಿಹಾರ ಬಿಡುಗಡೆಯಾಗುತ್ತದೆ ಸ್ವಲ್ಪ ತಾಳ್ಮೆ ಇರಲಿ. ಇದರಲ್ಲಿ ರಾಜಕೀಯ ಬೇಡ ಎಂದರು.