ಹುಬ್ಬಳ್ಳಿ ಯೋಧ ಮೃತಪಟ್ಟಿದ್ದು ಉಗ್ರರ ಗುಂಡಿನ ದಾಳಿಯಿಂದಲ್ಲ, ಅದು ಆತ್ಮಹತ್ಯೆ – ಸೇನಾ ಮೂಲಗಳಿಂದ ಮಾಹಿತಿ

545
firstsuddi

ಹುಬ್ಬಳ್ಳಿ : ಜಮ್ಮು-ಕಾಶ್ಮೀರದ ಕಣಿವೆ ರಾಜ್ಯದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎನ್ನಲಾಗಿದ್ದ ಯೋಧ ಮಂಜುನಾಥ ಓಲೇಕಾರ್ ಅವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ. ಮಂಜುನಾಥ್ ಅವರು ತಮ್ಮ 20ನೇ ವಯಸ್ಸಿನಲ್ಲಿ ಭಾರತೀಯ ಸೇನೆಗೆ ಸೇರಿದ್ದು, ಕಳೆದ ಒಂಬತ್ತು ವರ್ಷದಿಂದ ಸೇನೆಯಲ್ಲಿ ಸೇವೆಸಲ್ಲಿಸುತ್ತಿದ್ದ ಇವರು ಸದ್ಯ ಮದ್ರಾಸ್ ರೆಜೆಮೆಂಟ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 6ತಿಂಗಳ ಹಿಂದೆಯಷ್ಟೇ ಯೋಧ ಮಂಜುನಾಥ್ ಅವರು ವಿವಾಹವಾಗಿ ಸೇನೆಯಲ್ಲಿ ಸೇವೆ ಸಲ್ಲಿಸಲು ತೆರಳಿದ್ದರು. ಈ ವೇಳೆ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರು ಮೃತಪಟ್ಟಿದ್ದರು ಎನ್ನಲಾಗಿತ್ತು. ಆದರೆ ಮಂಜುನಾಥ್ ಅವರು ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೇನಾ ಮೂಲಗಳಿಂದ ಮಾಹಿತಿ ಲಭಿಸಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಸ್ಪಷ್ಟಪಡಿಸಿದ್ದಾರೆ.