ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ : ಸಿದ್ದರಾಮಯ್ಯ.

229
firstsuddi

ಬೆಂಗಳೂರು : ರಾಜ್ಯದಲ್ಲಿ ನೆರೆ ಉಂಟಾಗಿ ತಿಂಗಳೇ ಕಳೆದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆಯಾಗದ ಕಾರಣ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರೇ, ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ. ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ, ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ”. ಎಂದು ಟ್ವೀಟ್ ಮಾಡಿದ್ದಾರೆ.