ಮೈಸೂರು : ಪರಿಹಾರ ಹಣವನ್ನು ಹೆಚ್ಚಿಸುವ ಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಹಾನಿಯಾಗಿದೆ. ಆದರೆ ಪರಿಹಾರ ಹಣವನ್ನು ಹೆಚ್ಚಿಸುವ ಶಕ್ತಿ ರಾಜ್ಯ ಸರ್ಕಾರಕ್ಕಿಲ್ಲ. ಮುಂದಿನ ಬಜೆಟ್ ಮಂಡನೆ ನಂತರ ಇನ್ನೂ ಹೆಚ್ಚಿನ ಪರಿಹಾರವನ್ನು ತರಿಸುವಲ್ಲಿ ಗಮನಹರಿಸೋಣ. ಕೇಂದ್ರ ಸರ್ಕಾರದಿಂದ ಬಂದಿರುವ ಮೊದಲ ಕಂತಿನ ಹಣ ಬೆಳೆನಾಶ ಹಾಗೂ ಮನೆ ನಿರ್ಮಾಣ ಇಂತಹ ಕಾರ್ಯಕ್ಕೆ ಮೊದಲು ಬಳಸುತ್ತೇವೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಕಂತು ಬರಲಿದೆ ಎಂದರು.










