ಚಿಕ್ಕಮಗಳೂರು : ಗ್ಯಾಸ್ ಸಿಲಿಂಡರ್ ಸ್ಫೋಟ-ಮೂವರಿಗೆ ಗಂಭೀರ ಗಾಯ…

588
firstsuddi

ಚಿಕ್ಕಮಗಳೂರು : ಹೋಟೆಲ್‍ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆದಿದೆ. ಸಿಂಗಟಗೆರೆ ಗ್ರಾಮದ ಸುರೇಶ್ ಹೋಟೆಲ್‍ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಹೋಟೆಲ್‍ನಲ್ಲಿದ್ದ ಸುರೇಶ್, ಗೀತಮ್ಮ ಹಾಗೂ ತಿಪ್ಪೇಶ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.