ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರು ಸಾವು…

175
firstsuddi

ಮಧ್ಯಪ್ರದೇಶ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಶಾಂಗಬಾದ್‍ನಲ್ಲಿ ನಡೆದಿದೆ. ಆಟಗಾರರು ಇಂದು ಬೆಳಿಗ್ಗೆ ಕಾರಿನಲ್ಲಿ ಇತರಾಸಿಯಿಂದ ಹೊಶಾಂಗಾಬಾದ್ ನಲ್ಲಿ ಧ್ಯಾನ್ ಚಂದ್ ಟ್ರೋಫಿ ಪಂದ್ಯಾವಳಿಯಲ್ಲಿ ಆಡಲು ತರಳುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದು ಕಾರು ಕೆಳಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.