ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾನಸಿಕ ಅಸ್ವಸ್ಥರಾಗಿದ್ದೀರಿ : ಸಿ.ಟಿ. ರವಿ ಮತ್ತು ಸಿದ್ದರಾಮಯ್ಯ ಟ್ವೀಟ್ ವಾರ್…

205
firstsuddi

ಬೆಂಗಳೂರು : ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ. ರವಿ ಅವರ ನಡುವೆ ಟ್ವೀಟ್ ವಾರ್ ನಡೆದಿದ್ದು, ಸಚಿವ ಸಿ.ಟಿ. ರವಿ ಅವರು ತಮ್ಮ ಟ್ವಿಟರ್ ನಲ್ಲಿ “ ಗಾಂಧೀಜಿ ಅವರ ಹತ್ಯೆಗೆ ಸಂಚು ರೂಪಿಸಿದ್ದವರಲ್ಲಿ ಸಾವರ್ಕರ್ ಕೂಡಾ ಒಬ್ಬರು ಎಂದು ಹೇಳುತ್ತಿದ್ದೀರಿ, ನೀವು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾನಸಿಕ ಅಸ್ವಸ್ಥರಾಗಿದ್ದೀರಿ. ಇತಿಹಾಸದ ಬಗ್ಗೆ ನಿಮಗೆ ಅರಿವಿದೆಯಾ? ನೀವು ಯಾಕೆ ಸೆಲ್ಯೂಲರ್ ಜೈಲಿಗೆ ಹೋಗಬಾರದು. ನಾನೇ ಸ್ಪಾನ್ಸರ್ ಮಾಡುತ್ತೇನೆ ಎಂದು ಕಿಡಿಕಾರಿದರು. ಸಚಿವ ಸಿ.ಟಿ. ರವಿ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಯಿಸಿದ ಸಿದ್ದರಾಮಯ್ಯ ಅವರು “ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ ಎಂದು ಗುಡುಗಿದ್ದಾರೆ.