ಸಿದ್ದರಾಮಯ್ಯ ಅವರು ಕಾಂಗ್ರೆಸ್ ತೊರೆದು ಹೊರ ಬಂದರೂ ಆಶ್ಚರ್ಯವಿಲ್ಲ : ಎಂ.ಪಿ ರೇಣುಕಾಚಾರ್ಯ.

273
firstsuddi

ದಾವಣಗೆರೆ : ಸಿದ್ದರಾಮಯ್ಯ ಅವರು ಕಾಂಗ್ರೆಸ್ ತೊರೆದು ಹೊರ ಬಂದರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ತಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಕಾಡಿಬೇಡಿ ವಿರೋಧ ಪಕ್ಷದ ನಾಯಕ ಸ್ಥಾನ ಪಡೆದವರು. ಮೂರು ತಿಂಗಳ ಕಾಲ ವಿರೋಧ ಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಇದರಿಂದಲೇ ತಿಳಿಯುತ್ತದೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಯಾವ ರೀತಿಯ ಸ್ಥಾನಮಾನ ಇತ್ತು ಎಂಬುವುದು. ಇದರಿಂದಾಗಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಹೊರ ಬಂದರೂ ಆಶ್ಚರ್ಯಪಡುವ ಅವಶ್ಯಕತೆ ಇಲ್ಲ ಎಂದರು. ಇದೇ ವೇಳೆ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಸಾವರ್ಕರ್ ಅವರು ಅಪ್ರತಿಮ ದೇಶಭಕ್ತರು. ನೀವು ಮತಾಂಧ ಟಿಪ್ಪು ಜಯಂತಿಯನ್ನು ಆಚರಿಸುತ್ತೀರಿ. ನಾವು ದೇಶ ಭಕ್ತರಿಗೆ ಭಾರತ ರತ್ನ ನೀಡುವುದರಲ್ಲಿ ತಪ್ಪೇನಿದೆ. ಸಾವರ್ಕರ್ ಅವರ ಬಗ್ಗೆ ಸಿದ್ದರಾಮಯ್ಯ ಅವರು ಇತಿಹಾಸ ಓದಿ ತಿಳಿದುಕೊಳ್ಳಲಿ. ಸಾವರ್ಕರ್ ಅವರ ಹೇಳಿಕೆ ಕುರಿತು ಸಿದ್ದರಾಮಯ್ಯ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.