ಬೆಂಗಳೂರು : ರಾಜ್ಯದ ಹಲವೆಡೆ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಉತ್ತರ ಕರ್ನಾಟಕದ ಧಾರವಾಡ, ಕೊಪ್ಪಳ, ಹಾವೇರಿ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಣಭೀಕರ ಮಳೆ ಮತ್ತೆ ಆರಂಭವಾಗಿರುವುದು ಮಲೆನಾಡ ಜನರಲ್ಲಿ ಆತಂಕ ಹೆಚ್ಚಿಸಿದೆ.










