ಬಿಜೆಪಿಗೆ ಗೆಲುವಿನ ಭರವಸೆ- ಮಹಾರಾಷ್ಟ್ರದಲ್ಲಿ 5 ಸಾವಿರ ಲಾಡು ತಯಾರಿಸಿ ಸಂಭ್ರಮಾಚರಣೆಗೆ ಬಿಜೆಪಿ ಸಿದ್ದತೆ…

145
firstsuddi

ಮುಂಬೈ : ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಎರಡೂ ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ನಾಯಕರಲ್ಲಿ ಗೆಲುವಿನ ಭರವಸೆ ಹೆಚ್ಚಾಗಿದೆ. ಹೀಗಾಗಿ ಮುಂಬೈನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಸಿಹಿ ವಿತರಣೆಗಾಗಿ ಈಗಾಗಲೇ 5000 ಲಾಡುಗಳನ್ನು ತಯಾರಿಸಲಾಗಿದೆ. ಅಲ್ಲದೇ ಹೂವಿನ ಹಾರಗಳನ್ನೂ ಕೂಡಾ ಸಿದ್ದಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.