ಮೂಡಿಗೆರೆ : ಉಪ ವಲಯ ಅರಣ್ಯಾಧಿಕಾರಿ ಮೇಲೆ ಕಾಡಾನೆ ದಾಳಿ-ಗಂಭೀರ ಗಾಯ…

890
firstsuddi

ಮೂಡಿಗೆರೆ : ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡಾನೆಯನ್ನು ಮರಳಿ ಕಾಡಿಗೆ ಓಡಿಸುವ ವೇಳೆ ಉಪ ವಲಯ ಅರಣ್ಯಾಧಿಕಾರಿ ಮೇಲೆ ದಾಳಿ ಮಾಡಿರುವ ಘಟನೆ ತಾಲ್ಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ. ದಾಳಿಗೊಳಗಾದ ಅರಣ್ಯಾಧಿಕಾರಿ ಚೇತನ್ ಅವರು ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಅವರನ್ನು ಮೂಡಿಗೆರೆ ಎಂ.ಜಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.