ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ…

456
firstsuddi

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅತ್ತಿಕೊಡಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುರ್ಗಾಪರಮೇಶ್ವರಿ ದೇವಾಲಯದ ಅರ್ಚಕ ಪ್ರಸನ್ನ ಭಟ್ ಎಂಬುವವರ ಮನೆ ಇದಾಗಿದ್ದು, ರಾತ್ರಿ ಪೂಜೆಗೆ ತೆರಳಿದ್ದ ವೇಳೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.