ಬೆಂಗಳೂರು : ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದಿಂದ ಮಹಾ ಚಂಡಮಾರುತ ಎದ್ದಿದ್ದು, ಮುಂದಿನ 48 ಘಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.










