ಬೆಂಗಳೂರು : ಇಂದು ರಾಜ್ಯಾಧ್ಯಂತ ಸಮಸ್ತ ಕನ್ನಡಿಗರು 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ಕನ್ನಡಿಗರಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. “ ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ.











