ರಾಮನಗರ : ಬೀದಿ ನಾಯಿಗಳ ದಾಳಿಗೆ ಬಾಲಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆಂಚನಕುಪ್ಪೆಯ ಜನತಾ ಕಾಲೋನಿಯಲ್ಲಿ ನಡೆದಿದೆ. ಮೋನಿಕಾ ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಬಾಲಕಿ ಶನಿವಾರ ಸಂಜೆ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ದಾಳಿಯಿಂದ ತಲೆ, ಕುತ್ತಿಗೆ, ಬೆನ್ನು ಹಾಗೂ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.










