ರೈತರ ನೆರವಿಗಾಗಿ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ…

398
firstsuddi

ಬೆಂಗಳೂರು : ರೈತರ ನೆರವಿಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಳೆ ಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದು, ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ. “ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು” ಎಂದು ಟ್ವೀಟ್ ಮಾಡಿದ್ದಾರೆ.