ನವದೆಹಲಿ : ತೀವ್ರ ಕುತೂಹಲ ಮೂಡಿಸಿದ ಅಯೋಧ್ಯೆ ವಿವಾದದ ಅಂತಿಮ ತೀರ್ಪಿಗೆ ದಿನಗಣನೇ ಆರಂಭವಾಗಿದ್ದು, ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಅನಗತ್ಯ ಮತ್ತು ವಿವಾದಾತ್ಮಕ ಹೇಳಿಕೆ ನೀಡದಂತೆ ಕೇಂದ್ರ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ. ದೇಶದಲ್ಲಿ ಸೌಹಾರ್ಧತೆ ಮತ್ತು ಸಾಮರಸ್ಯದ ವಾತಾವರಣ ಕಾಪಾಡುವ ಅಗತ್ಯವಿದ್ದು, ಈ ವೇಳೆ ಅನಗತ್ಯ ಹೇಳಿಕೆಯನ್ನು ನೀಡದಿರಿ ಎಂದು ಸಚಿವರಿಗೆ ಪ್ರಧಾನಿ ಮೋದಿ ಅವರು ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೇ ಅಯೋಧ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಯಾವುದೇ ತೀರ್ಪು ನೀಡಿದರೂ ಅದನ್ನು ಸೋಲು-ಗೆಲುವು ಎಂದು ಭಾವಿಸದೇ ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.










