ಬೆಳಗಾವಿ : ಖಾಸಗಿ ಶಾಲಾ ಬಸ್ ಬೈಕ್ಗೆ ಡಿಕ್ಕಿಯಾಗಿ ಐದು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮೆಹಬೂಬ್ ನಗರದ ಬಳಿ ನಡೆದಿದೆ. ರಾಜನಂದಿನಿ(5) ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಬಾಲಕಿ ತನ್ನ ತಾಯಿ ಹಾಗೂ ಮಾವನ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಸೇಂಟ್ ಫ್ರಾನ್ಸಿಸ್ ಪ್ರಾಥಮಿಕ ಶಾಲೆಗೆ ಸೇರಿದ ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಹಾಗೂ ಮಾವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಚಾಲಕ ತಿರುವಿನಲ್ಲಿ ಅತಿ ವೇಗವಾಗಿ ಬಸ್ ಚಲಾಯಿಸಿದ್ದೇ ಕಾರಣ ಎನ್ನಲಾಗಿದ್ದು, ಈ ಕುರಿತು ಚಿಕ್ಕೋಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










