ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ-10 ಮಂದಿ ದುರ್ಮರಣ…

228
firstsuddi

ರಾಜಸ್ಥಾನ : ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 10 ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕನೆರ್ ಜಿಲ್ಲೆಯಲ್ಲಿ ನಡೆದಿದೆ. ನಿಕಾನೆರ್ ನಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್ ದಂಗರ್ ಗಢ  ಬಳಿ ತೆರಳುತ್ತಿದ್ದ ಟ್ರಕ್‍ಗೆ ರಭಸದಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ 5ಮಂದಿ ಮೃತಪಟ್ಟಿದ್ದು, ಉಳಿದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.