ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಯೋಧರೊಬ್ಬರು ನಿನ್ನೆ ಚೆನ್ನೈಯಲ್ಲಿ ಮೃತಪಟ್ಟಿದ್ದು, ಜಿಲ್ಲೆಯ ಹನಿಯಂಬಾಡಿ ಗ್ರಾಮದ ದೇವರಾಜು(40) ಮೃತ ಯೋಧ ಎನ್ನಲಾಗಿದ್ದು, ಚೆನ್ನೈನಲ್ಲಿ 5ನೇ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿ.ಆರ್.ಪಿ.ಎಫ್ ಯೋಧ ದೇವರಾಜು ಅವರು ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದು, ದೇವರಾಜು ಅವರು ಪತ್ನಿ ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ. ಯೋಧ ದೇವರಾಜು ಅವರ ಪಾರ್ಥೀವ ಶರೀರ ಇಂದು ಹುಟ್ಟೂರಾದ ಹನಿಯಂಬಾಡಿ ಗ್ರಾಮಕ್ಕೆ ಆಗಮಿಸಲಿದೆ ಎಂದು ತಿಳಿದು ಬಂದಿದೆ.










