ಮಂಗಳೂರು : ಗ್ಯಾಸ್ ಸಿಲಿಂಡರ್ ಸ್ಪೋಟ-ಇಬ್ಬರಿಗೆ ಗಾಯ…

174
firstsuddi

ಮಂಗಳೂರು : ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ವಾಸ್‍ಲೇನ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ಮಂಜುನಾಥ್(25) ಹಾಗೂ ರೇಖಾ(20) ಎಂದು ಗುರುತಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿದ್ದ ಸಿಲಿಂಡರ್‍ನಿಂದ ಅನಿಲ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಗಾಜು ಹಾಗೂ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸಿದ್ದಾರೆ.