ನವದೆಹಲಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದ್ದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ಸಿಪಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಬೇಕೆಂದು ಆದೇಶ ನೀಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ಬಹುಮತ ಸಾಬೀತು ಪಡಿಸುವ ದೃಶ್ಯಗಳನ್ನು ಚಿತ್ರಕರಿಸಬೇಕು ಹಾಗೂ ಕೂಡಲೇ ಹಂಗಾಮಿ ಸ್ಪೀಕರ್ ನೇಮಕವಾಗಬೇಕು. ಬಹುಮತದ ಸಂಪೂರ್ಣ ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನೋಡಿಕೊಳ್ಳಬೇಕು. ಬಹುಮತ ಸಾಬೀತು ಪ್ರಕ್ರಿಯೆ ನೇರಪ್ರಸಾರವಾಗಬೇಕು ಎಂದು ಆದೇಶ ಹೊರಡಿಸಿದೆ.










