ಶಬರಿಮಲೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅಯ್ಯಪ್ಪ ಭಕ್ತರಿಂದ ಪೆಪ್ಪರ್ ಸ್ಪ್ರೇ ದಾಳಿ..!

184
firstsuddi

ತಿರುವನಂತಪುರಂ : ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬರು ಪೆಪ್ಪರ್ ಸ್ಪ್ರೇ ದಾಳಿ ನಡೆಸಿರುವ ಘಟನೆ ಕೇರಳದ ಕೊಚ್ಚಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದಿದ್ದು, ಪೆಪ್ಪರ್ ಸ್ಪ್ರೇ ದಾಳಿ ನಡೆಸಿರುವ ವೀಡಿಯೋ ಈಗಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರು ಸೇರಿದಂತೆ ಐದು ಮಂದಿ ಮಹಿಳೆಯರು ಶಬರಿಮಲೆ ಪ್ರವೇಶಕ್ಕೆ ಮುಂದಾಗಿದ್ದರು. ಇಂದು ಬೆಳಿಗ್ಗೆ ಕೊಚ್ಚಿ ವಿಮಾನ ನಿಲ್ದಾಣದಿಂದ ತೃಪ್ತಿ ದೇಸಾಯಿ ತಂಡ ತಮಗೆ ಭದ್ರತೆ ನೀಡುವಂತೆ ಮನವಿ ಮಾಡಲು ಪೊಲೀಸ್ ಆಯುಕ್ತರ ಕಚೇರಿ ಬಳಿ ತೆರಳಿದ್ದರು. ಈ ವೇಳೆ ಅಯ್ಯಪ್ಪ ಭಕ್ತರು ಹಾಗೂ ಹೋರಾಟಗಾರ್ತಿ ಬಿಂದು ಅಮ್ಮಿಣಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಅಯ್ಯಪ್ಪ ಭಕ್ತರೊಬ್ಬರು ಬಿಂದು ಅವರ ಮೇಲೆ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದ್ದು, ದಾಳಿಯಿಂದ ಗಾಯಗೊಂಡಿದ್ದ ಬಿಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.