ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಬ್ಯಾಟ್ಸ್ಮನ್ ಹಾಗೂ ವಿಕೆಟ್ ಕೀಪರ್ ಸಂಜು ಸಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಸೈಯದ್ ಮುಷ್ತಾಕ್ ಅಲಿ ಟೂರ್ನಿ ವೇಳೆ ಶಿಖರ್ ಧವನ್ ಅವರು ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯಕೀಯ ತಪಾಸಣೆ ನಡೆಸಿದ ವೈದ್ಯರು ಗಾಯ ವಾಸಿಯಾಗಲು ಇನ್ನೂ ಕಾಲಾವಕಾಶ ಬೇಕಾಗುತ್ತದೆ. ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ ಎಂದು ಸೂಚಿಸಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಸಂಜು ಸಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಜು ಸಾಮ್ಸನ್ ಅವರು ಬಾಂಗ್ಲಾ ವಿರುದ್ಧದ ಟಿ-20 ಪಂದ್ಯಕ್ಕೆ ಆಯ್ಕೆಯಾಗಿದ್ದರೂ ಅವರಿಗೆ ಒಂದು ಪಂದ್ಯವೂ ಆಡಲೂ ಸಾಧ್ಯವಾಗಿರಲಿಲ್ಲ.










