ಚಿಕ್ಕಮಗಳೂರು : ದತ್ತ ಜಯಂತಿ ಆಚರಣೆ ಹಿನ್ನೆಲೆ, ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ ಪ್ರವಾಸ ಬಂದ್…

398
firstsuddi

ಚಿಕ್ಕಮಗಳೂರು : ದತ್ತ ಜಯಂತಿ ಆಚರಣೆ ಹಿನ್ನೆಲೆ, ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ ಪ್ರವಾಸ ಬಂದ್ ಮಾಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 10,11,12 ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಧಾರ ಪ್ರವಾಸಕ್ಕೆ ಸಂಪೂರ್ಣ ಬಂದ್ ಮಾಡಲಾಗಿದ್ದು, ಡಿ. 9ರ ಸಂಜೆ 6ರಿಂದ ಡಿ.13ರ ಬೆಳಿಗ್ಗೆ 6ರವರೆಗೆ ಪ್ರವಾಸ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.