ತೆಲಂಗಾಣ : ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದನ್ನು ಖಂಡಿಸಿ ದೇಶಾಧ್ಯಂತ ಪ್ರತಿಭಟನೆ ನಡೆಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈಗಾ ಪದವೀಧರ ವಿದ್ಯಾರ್ಥಿಯೊಬ್ಬ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗೆ ಬುದ್ಧಿವಾದ ಹೇಳಿ ಆತನನ್ನು ರಕ್ಷಿಸಿದ್ದಾರೆ.










