ಮೂಡಿಗೆರೆ : 2019ರ ದತ್ತ ಜಯಂತಿ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮೂಡಿಗೆರೆ ವತಿಯಿಂದ ಡಿಸೆಂಬರ್-10 ಮಂಗಳವಾರದಂದು ಪಟ್ಟಣದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ಮೂಡಿಗೆರೆಯ ಶ್ರೀ ವೇಣುಗೋಪಾಲ ದೇವಸ್ಥಾನದಿಂದ ಹೊರಟ ಮೆರವಣಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ಕೊನೆಗೆ ಬಸ್ ನಿಲ್ದಾಣದ ಬಳಿ ಇರುವ ಲಯನ್ಸ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದಿಕ್ಸೂಚಿ ಭಾಷಣವನ್ನು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮಾಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸಾಮಾಜಿಕ ಜಾಲತಾಣದ ಪ್ರಮುಖ್ ಶಶಾಂಕ್ ಅವರು ತಿಳಿಸಿದ್ದಾರೆ.










