ಹೈದರಾಬಾದ್‍ನ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಹುಟ್ಟಡಗಿಸಿದ ವೀರಕನ್ನಡಿಗ…

246
firstsuddi

ಹೈದರಾಬಾದ್ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೈದರಾಬಾದ್ ಪಶುವೈದ್ಯೆ ದಿಶಾ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಕನಾಟಕದ ಹುಬ್ಬಳ್ಳಿ ಮೂಲದ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದಾರೆ. ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದ ತಂಡ ಸ್ಥಳ ಪರಿಶೀಲನಗೆಂದು ನಾಲ್ವರು ಆರೋಪಿಗಳನ್ನು ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದು, ಈ ವೇಳೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ಧಿಯಾಗಿರುವ ವಿಶ್ವನಾಥ್ ನೇತೃತ್ವದ ತಂಡ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ವಿಶ್ವನಾಥ್ ಅವರು ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದೆಯೂ ಕೂಡಾ ಆಸಿಡ್ ದಾಳಿ ಮಾಡಿದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದರು.

ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ವಿಷಯ ತಿಳಿಯುತ್ತಿದ್ದಂತೆ ಹೈದರಾಬಾದ್‍ನಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ ಪೊಲೀಸರಿಗೆ ಜೈಕಾರ ಹಾಕುತ್ತಾ ಸಂತಸ ವ್ಯಕ್ತಪಡಿಸಿದ್ದಾರೆ.