ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಸಹೋದರಿ, ಕಿರುತೆರೆ ನಟಿ ನಿತ್ಯಾ ರಾಮ್ ಅವರು ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದು, ಇವರಿಬ್ಬರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದುವೆ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತ ಸ್ನೇಹಿತರು ಹಾಗೂ ಕಲಾವಿದರು ಭಾಗಿಯಾಗಿ ಶುಭ ಹಾರೈಸಿದ್ದಾರೆ. ನಿತ್ಯಾ ರಾಮ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ನಂದಿನಿ” ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಆದರೆ ಈಗಾ ಧಾರಾವಾಹಿಯಿಂದ ಹೊರಬಂದಿದ್ದು, ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.










